ಇಸ್ಲಾಮಾಬಾದ್: 'ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಲಾಗುತ್ತಿದೆ ಎಂಬುದಾಗಿ ಭದ್ರತಾ ಸಂಸ್ಥೆಗಳು ವರದಿ ಮಾಡಿವೆ' ಎಂದು ಪಾಕಿಸ್ತಾನ ವಾರ್ತಾ ಸಚಿವ ಫವಾದ್ ಚೌಧರಿ ಹೇಳಿದ್ದಾರೆ.
'ಇಮ್ರಾನ್ ಖಾನ್ ಅವರ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ' ಎಂದು ಆಡಳಿತಾರೂಢ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್‌ನ (ಪಿಟಿಐ) ನಾಯಕ ಫೈಸಲ್ ವಾವ್ಡಾ ಅವರು ವಾರದ ಹಿಂದಷ್ಟೇ ಹೇಳಿದ್ದರು. ಇದರ ಬೆನ್ನಲ್ಲೇ ಈಗ ಸಚಿವ ಚೌಧರಿ ಅವರಿಂದಲೂ ಇಂತಹ ಹೇಳಿಕೆ ಹೊರಬಿದ್ದಿದೆ. ಈ ವರದಿಯ ಬೆನ್ನಲ್ಲೇ ಪ್ರಧಾನಿ ಇಮ್ರಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಚೌಧರಿ ಹೇಳಿರುವುದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.
PublicNext
01/04/2022 05:18 pm