ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಘೋಷಣೆ

ಕೊಲಂಬೊ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಶುಕ್ರವಾರ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಮೂರುಪಟ್ಟು ಹೆಚ್ಚಾಗಿರುವ ಕಾರಣ ಜನ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಮಾತ್ರವಲ್ಲದೆ ಪ್ರಧಾನಿಗಳ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಸಾವಿರಾರು ಪ್ರತಿಭಟನಾಕಾರರು ರಾಜಧಾನಿಯಲ್ಲಿರುವ ಪ್ರಧಾನಿ ಅವರ ಖಾಸಗಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಒಂದು ದಿನದ ನಂತರ, ಏಪ್ರಿಲ್ 1 ರಂದು ಮೊದಲ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಬಳಿಕ, ಏಪ್ರಿಲ್ 14ರಂದು ರದ್ದುಗೊಳಿಸಲಾಗಿತ್ತು.

ಇದೀಗ, ಮತ್ತೆ ಪ್ರತಿಭಟನೆಗಳು ತೀವ್ರಗೊಂಡಿದ್ದು, ಶುಕ್ರವಾರ ಅಂಗಡಿ– ಮುಂಗಟ್ಟುಗಳನ್ನು ಮುಚ್ಚಿ, ಸಾರ್ವಜನಿಕ ಸಾರಿಗೆ ಬಂದ್ ಮಾಡಲಾಗಿತ್ತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಬಳಿಕ ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿರುವುದಾಗಿ ಅಧ್ಯಕ್ಷರ ವಕ್ತಾರರು ತಿಳಿಸಿದ್ದಾರೆ.

ರಾಜಪಕ್ಸ ರಾಜೀನಾಮೆಗೆ ಒತ್ತಾಯಿಸಿ ಶುಕ್ರವಾರ ರಾಷ್ಟ್ರೀಯ ಸಂಸತ್ತಿಗೆ ನುಗ್ಗಲು ಪ್ರಯತ್ನಿಸುತ್ತಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದ್ದಾರೆ. ಇನ್ನು ಶುಕ್ರವಾರ ಮಧ್ಯರಾತ್ರಿಯಿಂದಲೇ ತುರ್ತು ಪರಿಸ್ಥಿತಿ ಜಾರಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

07/05/2022 01:00 pm

Cinque Terre

34.53 K

Cinque Terre

2