ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಶುಕ್ರವಾರ (ಜೂನ್ 10)ರಂದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
78 ವರ್ಷ ವಯಸ್ಸಿನ ಪರ್ವೇಜ್ ಮುಷರಫ್ ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ 2016 ರಿಂದಲೂ ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ ಅವರು ದುಬೈನಲ್ಲಿ ವಾಸ ಮಾಡುತ್ತಿದ್ದರು. ಅಂದಿನಿಂದ ಅವರು ಸ್ವದೇಶವಾದ ಪಾಕಿಸ್ತಾನಕ್ಕೂ ಮರಳಿರಲಿಲ್ಲ. ಪಾಕಿಸ್ತಾನದಲ್ಲಿ ಪರ್ವೇಜ್ ಮುಷರಫ್ ವಿರುದ್ಧ ದೇಶದ್ರೋಹದ ಪ್ರಕರಣವೂ ದಾಖಲಾಗಿತ್ತು. ವಿಚಾರಣೆಗೆ ಸ್ವದೇಶಕ್ಕೆ ಆಗಮಿಸುವಂತೆ ಕೋರ್ಟ್ ಹಲವು ಬಾರಿ ನೋಟೀಸ್ ನೀಡಿತ್ತು.
ಪಾಕಿಸ್ತಾನದ ಮಿಲಿಟರಿ ಜನರಲ್ ಆಗಿದ್ದ ಪರ್ವೇಜ್ ಮುಷರಫ್ 1999ರ ಅಕ್ಟೋಬರ್‌ನಲ್ಲಿ ಬಲವಂತದಿಂದ ಪ್ರಧಾನಿ ಕೈಯಿಂದ ಅಧಿಕಾರ ಕಿತ್ತುಕೊಂಡವರು. ಪಾಕಿಸ್ತಾನದ ಇತಿಹಾಸದಲ್ಲಿ ಮೊದಲ ಬಾರಿಗೆ ಮಿಲಿಟರಿ ಆಡಳಿತವನ್ನು ತಂದವರು. ಅದಾದ ನಂತರ ಅಧ್ಯಕ್ಷರಾಗಿ ಆಯ್ಕೆಯಾದರು. 2007ರಲ್ಲಿ ಸಂವಿಧಾನವನ್ನು ಉಲ್ಲಂಘಿಸಿ ತುರ್ತುಪರಿಸ್ಥಿತಿ ಘೋಷಿಸಿದ್ದಕ್ಕಾಗಿ ಮುಷರಫ್ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗಿತ್ತು. ಅವರ ಮೇಲೂ ಸಾಕಷ್ಟು ಭ್ರಷ್ಟಾಚಾರದ ಆರೋಪಗಳಿವೆ. ಅಧಿಕಾರ ಕಳೆದುಕೊಂಡ ನಂತರ ಪಾಕಿಸ್ತಾನ ತೊರೆದು ದುಬೈನಲ್ಲಿ ನೆಲೆಸಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ಅವರು ದುಬೈನಲ್ಲಿ ಆಸ್ಪತ್ರೆ ಸೇರಿದ್ದರು.
PublicNext
10/06/2022 05:55 pm