ನಾರ : ಇಂದು ಬೆಳಿಗ್ಗೆ ಗುಂಡೇಟಿನಿಂದಾಗಿ ಆಸ್ಪತ್ರೆ ಪಾಲಾಗಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಬೋ ಅಬೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರೋದಾಗಿ ಸರ್ಕಾರಿ ಮೂಲಗಳು ಖಚಿತಪಡಿಸಿವೆ ಎಂದು ಜಪಾನ್ ಮಾಧ್ಯಮಗಳು ವರದಿ ಮಾಡಿವೆ. ಪಶ್ಚಿಮ ಜಪಾನ್ ನ ನಾರಾ ನಗರದಲ್ಲಿ ಭಾಷಣ ಮಾಡುವ ವೇಳೆ ಅಬೆ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಬೆ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಪಾನ್ ಹಿರೋಕಾಜು ಮಾಟ್ಸುನೊ ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ, ಇಂತಹ ಅಮಾನುಷ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಬೆ ಅವರ ಮೇಲೆ 2 ಸುತ್ತು ಗುಂಡಿನ ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ನಡೆಸಿದ ಆರೋಪಿಯನ್ನು ತೆತ್ಸುಯಾ ಯಮಗಾಮಿ ಎಂದು ಪೊಲೀಸರು ಗುರುತಿಸಿದ್ದು, ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಂಟ್ರಿ ಪಿಸ್ತೂಲ್ ನಿಂದ ಹತ್ಯೆ ಮಾಡಿದ ಹತ್ಯೆಕೋರ ಜಪಾನ್ ಸೈನ್ಯದಲ್ಲಿ ಕಾರ್ಯನಿರ್ವಹಿಸಿದ್ದ ಎನ್ನಲಾಗಿದೆ.
PublicNext
08/07/2022 02:37 pm