ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಂಕಾ ಪ್ರಧಾನಿ ಮನೆಗೆ ಬೆಂಕಿ : ಹೊಸ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್

ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ರೊಚ್ಚಿಗೆದ್ದ ಜನ ದಂಗೆ ಎದ್ದಿದ್ದಾರೆ. ಇನ್ನು ಉದ್ರಿಕ್ತ ಗುಂಪೊಂದು ಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ ಮನೆಗೆ ಬೆಂಕಿ ಹಚ್ಚಿ ವಾಹನಗಳನ್ನು ಜಖಂಗೊಳಿಸಿದೆ. ಇದರ ಬೆನ್ನಲ್ಲೇ ರನಿಲ್ ವಿಕ್ರಮಸಿಂಘೆ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಕೊಲಂಬೋದಲ್ಲಿರುವ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಿದ್ದು, ಪ್ರಧಾನಿಗೆ ಸೇರಿದ ವಾಹನಗಳನ್ನು ಪುಡಿಮಾಡಿದ್ದಾರೆ.

ಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಸರ್ವ ಪಕ್ಷ ಸರ್ಕಾರಕ್ಕೆ ಅವಕಾಶ ನೀಡುವುದಾಗಿ ಘೋಷಿಸಿದ ವಿಕ್ರಮಸಂಘೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಆದರೆ ಹೊಸ ಸರ್ಕಾರ ರಚನೆಯಾಗುವವರೆಗೆ ವಿಕ್ರಮಸಿಂಘೆ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಬುಧವಾರ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ.

ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾದಲ್ಲಿ ಜನತೆ ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದ್ದು, ದೇಶದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.

Edited By : Nirmala Aralikatti
PublicNext

PublicNext

10/07/2022 08:33 am

Cinque Terre

196.4 K

Cinque Terre

6

ಸಂಬಂಧಿತ ಸುದ್ದಿ