ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ ನಿಲ್ಲುವಂತೆ ಕಾಣುತ್ತಿಲ್ಲ. ರಷ್ಯಾ ಸೋಮವಾರ ಉಕ್ರೇನ್‌ನ ರಾಜಧಾನಿ ಕೀವ್ ಸೇರಿದಂತೆ ಹಲವು ನಗರಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ಕೀವ್ ಮೇಲೆ ನಡೆಸಿರುವ ದಾಳಿಯಲ್ಲಿ ಕನಿಷ್ಠ ಎಂಟು ಜನರು ಮೃತಪಟ್ಟಿದ್ದಾರೆ.
ರಷ್ಯಾ ಮತ್ತು ಕ್ರಿಮಿಯಾವನ್ನು ಸಂಪರ್ಕಿಸುವ ಸೇತುವೆ ಮೇಲೆ ಟ್ರಕ್ ಬಾಂಬ್ ಸ್ಫೋಟಗೊಂಡಿದೆ. ಇನ್ನು ಉಕ್ರೇನಿನ ಡ್ನಿಪ್ರೊದಲ್ಲಿ ರಸ್ತೆ ಮಧ್ಯದಲ್ಲಿಯೇ ಎರಡು ಕ್ಷಿಪಣಿಗಳ ದಾಳಿ ನಡೆದಿದೆ. ಈ ದೃಶ್ಯವು ಅದೇ ಮಾರ್ಗವಾಗಿ ಹೋಗುತ್ತಿದ್ದ ಕಾರಿನ ಡ್ಯಾಶ್‌ಕ್ಯಾಮ್‌ದಲ್ಲಿ ಸೆರೆಯಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಷ್ಯಾ ಕೃತ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
PublicNext
11/10/2022 11:16 am