ಬೆಂಗಳೂರು- ಹೊಸದಾಗಿ ನೇಮಕವಾದ ಪಿಯು ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡುವಂತೆ ಒತ್ತಾಯಿಸಿ ಉಪನ್ಯಾಸಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಉಪನ್ಯಾಸಕರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು ಸಾಂಕೇತಿಕವಾಗಿ 28 ಉಪನ್ಯಾಸಕರಿಗೆ ನೇಮಕಾತಿ ಆದೇಶ ನೀಡಲಾಗಿದೆ.
ಸಿಎಂ ಯಡಿಯೂರಪ್ಪ ನೇಮಕಾತಿ ಆದೇಶ ಪತ್ರಗಳನ್ನು ಉಪನ್ಯಾಸಕರಿಗೆ ನೀಡಿದ್ದಾರೆ. ಉಳಿದ ಎಲ್ಲ ಉಪನ್ಯಾಸಕರಿಗೆ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ಅಪ್ಲೋಡ್ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
PublicNext
20/11/2020 09:41 pm