ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಗ್ನಿಪಥ ಪ್ರತಿಭಟನೆ ಮಧ್ಯೆ ಅಗ್ನಿವೀರರಿಗೆ ಉದ್ಯೋಗದ ಆಫರ್ ನೀಡಿದ ಆನಂದ್ ಮಹೀಂದ್ರಾ

ನವದೆಹಲಿ: ಕೇಂದ್ರ ಸರ್ಕಾರವು ಇತ್ತೀಚೆಗೆ ಘೋಷಿಸಿದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯ ಕುರಿತು ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಸೋಮವಾರ ಈ ಯೋಜನೆಯಡಿ ತರಬೇತಿ ಪಡೆದ ಯುವಕರನ್ನು ತಮ್ಮ ಕಂಪನಿಗಳನ್ನು ಆದ್ಯತೆಯ ಮೇರೆಗೆ ಉದ್ಯೊಗಿಗಳನ್ನಾಗಿ ನೇಮಿಸಿಕೊಳ್ಳುವುದಾಗಿ ಘೋಷಿಸಿದ್ದಾರೆ.

ಕಳೆದ ವರ್ಷ ಈ ಯೋಜನೆಯನ್ನು ಪ್ರಸ್ತಾಪಿಸಿದಾಗ ಅಗ್ನಿವೀರ್‌ಗಳು ಗಳಿಸುವ ಶಿಸ್ತು ಮತ್ತು ಕೌಶಲ್ಯಗಳು ಅವರನ್ನು ಅತ್ಯುತ್ತಮವಾಗಿ ಉದ್ಯೋಗಿಯನ್ನಾಗಿ ಮಾಡುತ್ತದೆ ಎಂದು ಹೇಳಿದ್ದಾಗಿ ಆನಂದ್ ಮಹೀಂದ್ರಾ ಉಲ್ಲೇಖಿಸಿದ್ದಾರೆ. ಅಗ್ನಿಪಥ್ ಯೋಜನೆಯಂತಹ ತರಬೇತಿ ಪಡೆದ, ಸಮರ್ಥ ಯುವಕರನ್ನು ನೇಮಿಸಿಕೊಳ್ಳುವ ಅವಕಾಶವನ್ನು ಮಹೀಂದ್ರಾ ಗ್ರೂಪ್ ಸ್ವಾಗತಿಸುತ್ತದೆ ಎಂದು ಅವರು ಟ್ವೀಟ್‌ನಲ್ಲಿ ಪ್ರಕಟಿಸಿದ್ದಾರೆ.

ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಕೈಗೊಂಡಿರುವು ಈ ನಿರ್ಧಾರವನ್ನು ಸಾಕಷ್ಟು ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ ಒಬ್ಬರು ಅಗ್ನಿವೀರ್​ ಮಹೀಂದ್ರಾ ಗ್ರೂಪ್​ನಿಂದ ಯಾವ ಹುದ್ದೆಯನ್ನು ನೀಡುತ್ತಾರೆ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಆನಂದ್ ಮಹೀಂದ್ರಾ, "ಕಾರ್ಪೊರೇಟ್ ವಲಯದಲ್ಲಿ ಅಗ್ನಿವೀರ್‌ಗಳ ಉದ್ಯೋಗಕ್ಕೆ ದೊಡ್ಡ ಅವಕಾಶಗಳಿವೆ" ಎಂದು ಉತ್ತರಿಸಿದ್ದಾರೆ.

Edited By : Vijay Kumar
PublicNext

PublicNext

20/06/2022 11:33 am

Cinque Terre

33.99 K

Cinque Terre

3

ಸಂಬಂಧಿತ ಸುದ್ದಿ