ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಕರ ದಿನಾಚರಣೆಯಂದೇ ಶಿಕ್ಷಕಾಂಕ್ಷಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.
ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ 5 ಸಾವಿರ ಶಿಕ್ಷಕರ ನೇಮಕ ಮಾಡಲು ಕ್ರಮ ವಹಿಸಲಾಗುವುದು ಎಂದು ಘೋಷಿಸಿದ್ದಾರೆ.
ಸಮಾರಂಭದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಸ್ತಾಪಿಸಿದ್ದರು. ಈ ಸಂಬಂಧ ಸಿಎಂ ಜೊತೆ ಮಾತನಾಡಿದ್ದೇನೆ ಎಂದು ತಮ್ಮ ಭಾಷಣದ ವೇಳೆ ಉಲ್ಲೇಖಿಸಿದ್ದರು.
ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವರ ಮನವಿಗೆ ಸ್ಪಂದಿಸುತ್ತಾ, ಪ್ರಸಕ್ತ ವರ್ಷದಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ಹೇಳಿದರು.
PublicNext
05/09/2021 09:08 pm