ಗದಗ : 12ನೇ ಶತಮಾನದ ಮಹಾಶರಣ ಬಸವಣ್ಣನವರ ಅನುಭವ ಮಂಟಪದಲ್ಲಿ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಮಹಾಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶ ಗುಣಗಳನ್ನು ಸಮಾಜ ಬಾಂಧವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜವನ್ನು ಮುಖ್ಯ ವಾಹಿನಿಗೆ ತರಬೇಕು ಎಂದು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಅಧ್ಯಕ್ಷ ಗುಡ್ಡಪ್ಪ ಹಡಪದ ಹೇಳಿದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಸಮಾಜದ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ 888ನೇಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಾಶರಣ ಹಡಪದ ಅಪ್ಪಣ್ಣನವರ ಪತ್ನಿ ಲಿಂಗಮ್ಮನವರು ಸುಮಾರು ವಚನಗಳನ್ನು ನಾಡಿಗೆ ಕೊಟ್ಟಿದ್ದಾರೆ. ನಾವೆಲ್ಲರೂ ವಚನಗಳನ್ನು ಓದುವ ಮುಖಾಂತರ ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವುದರ ಮುಖಾಂತರ ಸಮಾಜದ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು ಎಂದು ಸಮಾಜ ಬಾಂಧವರಿಗೆ ಕರೆ ನೀಡಿದರು.
PublicNext
26/07/2022 08:30 pm