ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್ಮುಂದೆ ಗ್ರಾಮ ಲೆಕ್ಕಿಗರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ

ಬೆಂಗಳೂರು: ಪಿಯುಸಿ ಅಂಕಗಳ ಮೆರಿಟ್ ಆಧಾರಿತವಾಗಿ ಇಲ್ಲಿಯವರೆಗೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು. ಸದ್ಯ ಈ ನಿಯಮವನ್ನು ರಾಜ್ಯ ಸರಕಾರ ಕೈಬಿಟ್ಟಿದ್ದು ಇನ್ಮುಂದೆ ಈ ಹುದ್ದೆಗಳಿಗೂ ಸ್ಪರ್ಧತ್ಮಕ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಇದಕ್ಕಾಗಿ ಆದೇಶ ಹೊರಬಿದ್ದಿದೆ.

ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಸ್ತುತ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳುತ್ತಿದ್ದು, ಇದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಕೆಇಎ ಮೂಲಕ ಗ್ರಾಮಲೆಕ್ಕಿಗರ ನೇಮಕ ಮಾಡುವ ಸಂಬಂಧ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಅಧ್ಯಕ್ಷರನ್ನಾಗಿ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಭೂ ಮಾಪನ ಕಂದಾಯ ವ್ಯಸಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

Edited By : Nagaraj Tulugeri
PublicNext

PublicNext

08/10/2022 07:37 am

Cinque Terre

45.68 K

Cinque Terre

4

ಸಂಬಂಧಿತ ಸುದ್ದಿ