ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ 150 ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆರಂಭಿಕ 2 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಕನ್ನಡ ಹಾಗೂ ಆಂಗ್ಲ ಭಾಷೆ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು. ಕಂಪ್ಯೂಟರ್ ಬೇಸಿಕ್ಸ್ ಕೋರ್ಸ್ ನ ಪ್ರಮಾಣಪತ್ರ ಹೊಂದಿರಬೇಕು. ನ್ಯಾಯಾಲಯದ ಪರಿಷ್ಕೃತ ವೇತನ ಶ್ರೇಣಿ ನಿಯಮ 2018ರ ಅನುಸಾರ ಅಂಗೀಕೃತ ಭತ್ಯೆಗಳೊಂದಿಗೆ ಮಾಸಿಕ 25,500 ರೂ.ನಿಂದ 81,100 ರೂ. ವೇತನ ಇದೆ.
ವಯೋಮಿತಿ: ಅರ್ಜಿ ಸಲ್ಲಿಕೆ ಕೊನೇ ದಿನಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ, ಸಾಮಾನ್ಯವರ್ಗದ ಅಭ್ಯರ್ಥಿಗೆ ಗರಿಷ್ಠ 35 ವರ್ಷ. ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಇತರ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು 27.11.2021 ಕೊನೆ ದಿನ
ಅಧಿಸೂಚನೆಗೆ: https://bit.ly/3jJAsah
ಮಾಹಿತಿಗೆ ಹಾಗೂ ಅರ್ಜಿ ಸಲ್ಲಿಕೆಗೆ: http://karnatakajudiciary.kar.nic.in
PublicNext
03/11/2021 06:46 pm