ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾರ್ಚ್ 27ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರು: 18ರಿಂದ 35 ವರ್ಷ ವಯಸ್ಸಿನ ನಿರುದ್ಯೋಗಿ ಯುವಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಮಾರ್ಚ್ 27ರಂದು ಬೆಳಿಗ್ಗೆ 9.30 ರಿಂದ ಸಂಜೆ 4.30ರವರೆಗೆ ಉದ್ಯೋಗಮೇಳ ಆಯೋಜಿಸಲಾಗಿದೆ. ಕುಂಬಳಗೋಡಿನ, ರಾಮೋಹಳ್ಳಿ ಕ್ರಾಸ್ ಬಳಿಯಿರುವ ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಎಸ್ಎಸ್‌ಎಸ್‌ಸಿ, ಪಿಯುಸಿ ಸೇರಿ ಉನ್ನತ ಶಿಕ್ಷಣ ಪಡೆದವರು ಭಾಗವಹಿಸಬಹುದಾಗಿದೆ.

ಐಟಿಐ, ಡಿಪ್ಲೋಮ, ಬಿಕಾಂ, ಬಿಬಿಎ, ಬಿಎ, ಬಿಸಿಎ, ಬಿಇ, ಎಂಕಾಂ, ಎಂಬಿಎ, ಎಂಎ, ಎಂಸಿಎ ಪದವಿಗಳನ್ನು ಹೊಂದಿದ ಉದ್ಯೋಗಕಾಂಕ್ಷಿಗಳಿಗೆ ಒಂಭತ್ತು ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳಾದ ಮುತ್ತೂಟ್ ಗ್ರೂಪ್, ಎಚ್ ಡಿ ಎಫ್ ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್,ಯುರೇಕಾ ಫೋರ್ಬ್ಸ್, ಟೀಮ್ ಲೀಸ್, ಯುಟಿಎಲ್ ಟೆಕ್ನಾಲಜಿ ಲಿಮಿಟೆಡ್, ಜಸ್ಟ್ ಡಯಲ್, ಇಂಪ್ಯಾಕ್ಟ್, ರಿಲೆಯನ್ಸ್‌ಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳುವ ಅವಕಾಶ ಇದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್‌ ನಂಬರ್‌: 9964907444/7975014738ನ್ನು ಹಾಗೂ ನೋಂದಣಿಗಾಗಿ https://forms.gle/FcuM18DKZ7Gsngqm6 ಗೂಗಲ್ ಲಿಂಕ್‌ನ್ನು ಸಂಪರ್ಕಿಸಬಹುದಾಗಿದೆ. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

18/03/2022 06:42 pm

Cinque Terre

57.62 K

Cinque Terre

7