ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು : ಟಿಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಓರ್ವನ ಸ್ಥಿತಿ ಗಂಭೀರ

ಕೊಡಗು: ಟಿ.ಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯ ಚೈನ್ ಗೇಟ್ ಬಳಿ ನಡೆದಿದೆ.

ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಟಿ.ಟಿ ಹಾಗೂ ಮಡಿಕೇರಿ ಗೌಡ ಸಮಾಜ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಬೈಕ್ ನಲ್ಲಿದ್ದ ಚೇರಂಬಾಣೆ ನಿವಾಸಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆತನನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಇನ್ನೂ ಬೈಕ್ ನಲ್ಲಿದ್ದ ಮತ್ತೊಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಟಿ.ಟಿಯಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಇನ್ನೂ ಘಟನಾ ಸ್ಥಳಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Edited By : Nagesh Gaonkar
PublicNext

PublicNext

19/10/2024 05:40 pm

Cinque Terre

26.69 K

Cinque Terre

2