ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು!- ಪ್ರಾಣಾಪಾಯದಿಂದ ಚಾಲಕ ಪಾರು

ಕೊಡಗು: ಚಾಲಕನ ನಿಯಂತ್ರಣ ಕಳೆದುಕೊಂಡ ಟಯೋಟಾ ಕಾರು ರಸ್ತೆಬದಿಯ 40 ಅಡಿ ಪ್ರಪಾತಕ್ಕೆ ಉರುಳಿ ಬಿದ್ದು ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನಾಪೋಕ್ಲು ಭಾಗಮಂಡಲ ಮುಖ್ಯರಸ್ತೆಯ ಬಲ್ಲಮಾವಟಿಯಲ್ಲಿ ಸಂಭವಿಸಿದೆ.

ನಾಪೋಕ್ಲು ಕಡೆಯಿಂದ ಬಲ್ಲಮಾವಟಿ ಕಡೆಗೆ ಬಲ್ಲಮಾವಟಿ ಎಡಿಕೇರಿ ಗ್ರಾಮದ ನಿವಾಸಿ ಗಣಪತಿ (ಉಲ್ಲಾಸ್) ಎಂಬುವವರು ಚಲಾಯಿಸುತ್ತಿದ್ದ ಕಾರು, ನಾಪೋಕ್ಲು ಭಾಗಮಂಡಲ ಮುಖ್ಯರಸ್ತೆಯ ಬಲ್ಲಮಾವಟಿ ಡಬಲ್ ಸೇತುವೆ ಬಳಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ 40 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಗೊಂಡ ಕಾರು ಚಾಲಕ ಗಣಪತಿ (ಉಲ್ಲಾಸ್) ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Edited By : Nagesh Gaonkar
PublicNext

PublicNext

11/12/2024 09:28 pm

Cinque Terre

31.05 K

Cinque Terre

0

ಸಂಬಂಧಿತ ಸುದ್ದಿ