ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಶನಿವಾರಸಂತೆ ವಿಜಯ ವಿನಾಯಕ ದೇವಾಲಯದಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ಸೆರೆ

ಕೊಡಗು: ದೇವಾಲಯದ ಬಾಗಿಲು ಮುರಿದು ಹುಂಡಿ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲೆ ಶನಿವಾರಸಂತೆಯ ವಿಜಯ ವಿನಾಯಕ ದೇವಾಲಯದಲ್ಲಿ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ. ಭಾನುವಾರ ರಾತ್ರಿ ಸ್ಕೂಟಿಯಲ್ಲಿ ಮುಖಕ್ಕೆ ಮಾಸ್ಕ್ ಧರಿಸಿ ಬಂದ ಖದೀಮನೊಬ್ಬ ದೇವಾಲಯದ ಬಾಗಿಲು ಮುರಿದು ಒಳಹೊಕ್ಕು ವಿಜಯ ವಿನಾಯಕ ದೇವಾಲಯದ ಹುಂಡಿ ಹೊತ್ತು ಪರಾರಿಯಾಗಿದ್ದಾನೆ. ಚೋರನ ಕೈ ಚಳಕ ದೇವಾಲಯದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಳ್ಳತನ ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಎರಡನೆ ಬಾರಿಗೆ ಇದೇ ದೇವಾಲಯದಲ್ಲಿ ಕಳ್ಳತನ ನಡೆಯುತ್ತಿದ್ದು, ಪೊಲೀಸರು ಸರಿಯಾಗಿ ತನಿಖೆ ನಡೆಸದ ಕಾರಣ ಪದೇ ಪದೇ ಕಳ್ಳತನ ಪ್ರಕರಣ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

Edited By : Ashok M
PublicNext

PublicNext

04/11/2024 11:33 am

Cinque Terre

23.04 K

Cinque Terre

0

ಸಂಬಂಧಿತ ಸುದ್ದಿ