ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಪ್ರತಿಯೊಬ್ಬರನ್ನು ಗೌರವಿಸುವ ಮೂಲಕ ಮಾನವ ಹಕ್ಕು ಸಂರಕ್ಷಿಸಿ - ಆರ್.ಐಶ್ವರ್ಯ

ಕೊಡಗು: ಸಮಾಜದಲ್ಲಿ ಪ್ರತಿಯೊಬ್ಬರನ್ನು ಗೌರವಿಸುವ ಮೂಲಕ ಮಾನವ ಹಕ್ಕುಗಳನ್ನು ಸಂರಕ್ಷಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಕರೆ ನೀಡಿದ್ದಾರೆ.

ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಮಾನವ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಮನುಷ್ಯ ಜಾತಿ ತಾನೊಂದೇ ವಲಂ’ ಪಂಪ ಹೇಳಿರುವಂತೆ ಯಾವುದೇ ಜಾತಿ, ಧರ್ಮ, ಅಸಮಾನತೆ ಇಲ್ಲದೆ ಎಲ್ಲರನ್ನು ಸಮಾನವಾಗಿ ಕಾಣುವ ಮೂಲಕ ಮಾನವ ಹಕ್ಕುಗಳನ್ನು ಉಳಿಸಿ ವಿಶ್ವ ಮಾನವರಾಗಬೇಕು ಎಂದು ಅವರು ಹೇಳಿದರು.

‘ಮಹಿಳೆಯರ ಮತ್ತು ಮಕ್ಕಳ ಶೋಷಣೆ, ಜಾತಿ ಹೆಸರಿನಲ್ಲಿ ನಿಂದನೆ ಮಾಡುವುದು ಮಾನವ ಹಕ್ಕು ಉಲ್ಲಂಘನೆ ಮಾಡಿದಂತೆ. ಆದ್ದರಿಂದ ಮಾನವ ಹಕ್ಕುಗಳನ್ನು ರಕ್ಷಿಸುವ ಮೂಲಕ ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನರು ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.’

Edited By : Abhishek Kamoji
Kshetra Samachara

Kshetra Samachara

10/12/2024 06:37 pm

Cinque Terre

900

Cinque Terre

0

ಸಂಬಂಧಿತ ಸುದ್ದಿ