ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಕಾರ್ಮಿಕನ ಮೇಲೆ ಕಾಡಾನೆ ದಾಳಿ, ಪ್ರಾಣಾಪಾಯದಿಂದ ಪಾರಾದ ಕಾರ್ಮಿಕ

ಕೊಡಗು: ಕಾಡಾನೆಯೊಂದು ಕಾಫಿ ತೋಟ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ ಪಾಲಿಬೆಟ್ಟ ಮೂಕಾ ಕಾಫಿ ತೋಟದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಪಾಲಿಬೆಟ್ಟದ ಕಾರ್ಮಿಕ ಮಂಜು(42) ಅಮ್ಮತಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಮಿಕ ಮಂಜು ಮತ್ತು ಸ್ನೇಹಿತನೊಂದಿಗೆ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ ಸಂದರ್ಭ ಕಾಡಾನೆಯೊಂದು ಹಿಂಬದಿಯಿಂದ ಏಕಾಏಕಿ ದಾಳಿ ಮಾಡಿ ತೋಟದೊಳಗೆ ನುಸುಳಿದೆ.

ಜೊತೆಯಲಿದ್ದ ಮತ್ತೋರ್ವ ಕಾರ್ಮಿಕ ಕಾಡಾನೆ ದಾಳಿಯಿಂದ ಪಾರಾಗಿ ಇತರ ಕಾರ್ಮಿಕರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಬಂದ ಕಾರ್ಮಿಕರು ಗಂಭೀರ ಗಾಯಗೊಂಡ ಮಂಜು ಎಂಬಾತನನ್ನ

ಪ್ರಥಮ ಚಿಕಿತ್ಸೆಗೆ ಅಮ್ಮತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಸಿಎಫ್ ಗೋಪಾಲ್, ಆರ್ ಎಫ್ ಓ ಗಂಗಾಧರ್ ಗಾಯಾಳುವಿನ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಳುವಿನ ಸಂಪೂರ್ಣ ವೆಚ್ಚವನ್ನು ಇಲಾಖೆ ಬರಿಸಲಿದ್ದು ಸಿಬ್ಬಂದಿಗಳಾದ ಡಿ ಆರ್ ಎಫ್ ಒ ಶಶಿ, ಪ್ರಶಾಂತ್, ಅರಣ್ಯ ರಕ್ಷಕ ಸಚಿನ್ ಅವರನ್ನ ನಿಯೋಜಿಸಲಾಗಿದೆ.

ಕಾಡಾನೆ ದಾಳಿ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಿ ಆನೆಯನ್ನು ಕಾಡಿಗಟ್ಟಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

Edited By : Abhishek Kamoji
Kshetra Samachara

Kshetra Samachara

11/12/2024 08:50 pm

Cinque Terre

380

Cinque Terre

0