ಕೊಡಗು: ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಹೇಳುತ್ತಾರೆ. ಆದರೆ ಸಹಕಾರ ಕ್ಷೇತ್ರ ಸೇರಿದಂತೆ ಪ್ರತಿಯೊಂದು ರಂಗದಲ್ಲಿಯೂ ಸಹ ಜಾತಿ, ಸಮಾಜ, ರಾಜಕಾರಣ ಇದ್ದೇ ಇದೆ. ಇದರ ನಡುವೆಯೂ ಹಿಂದಿನವರು ಕಟ್ಟಿಕೊಂಡು ಬಂದಿರುವ ಸಹಕಾರ ಕ್ಷೇತ್ರವನ್ನು ಬಲಪಡಿಸುವುದು ಅತ್ಯವಶ್ಯಕ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ತಿಳಿಸಿದ್ರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆಯಿಂದ ಕರ್ನಾಟಕ ಇನ್ಸ್‍ಸಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಹಾಗೂ ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭವನದಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಹಕಾರ ಕ್ಷೇತ್ರದಲ್ಲಿ ಯಾರೂ ಸಹ ಮೂಗು ತೂರಿಸಬಾರದು ಎಂದು ಹೇಳುತ್ತಾರೆ. ಆದರೆ ಎಲ್ಲಾ ರಂಗದಲ್ಲಿಯೂ ಒಂದಲ್ಲ ಒಂದು ರೀತಿಯ ರಾಜಕಾರಣ ಇರುತ್ತದೆ. ಇದರಿಂದ ಯಾವುದೇ ರಂಗ ಹೊರತಾಗಿಲ್ಲ ಎಂದು ಮನುಮುತ್ತಪ್ಪ ಅವರು ನುಡಿದರು.
PublicNext
20/11/2024 08:03 pm