ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ನ.22ರಂದು ಬೃಹತ್ ಪ್ರತಿಭಟನೆ, ಧರಣಿ ಸತ್ಯಾಗ್ರಹ- ಬಿಜೆಪಿ ಜಿಲ್ಲಾಧ್ಯಕ್ಷ ರವಿಕಾಳಪ್ಪ

ಕೊಡಗು: ಕೃಷಿ ಚಟುವಟಿಕೆಗಳ ಮೂಲಕ ಬದುಕು ಕಟ್ಟಿಕೊಂಡಿರುವ ರೈತ ಸಮುದಾಯದ ಬದುಕಿಗೆ ಆತಂಕ ಮೂಡಿಸಿರುವ ಕರಾಳ “ವಕ್ಫ್ ಕಾಯ್ದೆ”ಯನ್ನು ಹಿಂಪಡೆಯಬೇಕು ಮತ್ತು ಹಗರಣಗಳಲ್ಲಿ ಮುಳುಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ನ.22ರಂದು ಕೊಡಗು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದಿನಪೂರ್ತಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ಚೌಡೇಶ್ವರಿ ದೇಗುಲದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು, ನಗರದ ಹಳೇ ಖಾಸಗಿ ಬಸ್ ನಿಲ್ದಾಣ, ಜ.ತಿಮ್ಮಯ್ಯ ವೃತ್ತವನ್ನು ಹಾದು ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ. ಬಳಿಕ ಸಂಜೆ 5 ಗಂಟೆಯವರೆಗೆ ಧರಣಿ ಮುಷ್ಕರ ನಡೆಸಲಾಗುವುದು ಎಂದರು.

Edited By : Shivu K
PublicNext

PublicNext

20/11/2024 08:14 pm

Cinque Terre

43.83 K

Cinque Terre

0

ಸಂಬಂಧಿತ ಸುದ್ದಿ