ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ದಲಿತ ಕುಟುಂಬಕ್ಕೆ ಸಾಂತ್ವನ ಹೇಳಿದ ತಂಡ

ಕೋಲಾರ : ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಉಳ್ಳೇರಹಳ್ಳಿ ಗ್ರಾಮದಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಬಾಲಕನ ಕುಟುಂಬದವರಿಗೆ ದಂಡ ವಿಧಿಸಿರುವ ಕುರಿತು ಕುಟುಂಬದವರನ್ನು ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ. ಕುಮಾರಸ್ವಾಮಿ ಹಾಗೂ ಸಮಿತಿ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ನೆರವಿನ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್, ಎಸ್ಪಿ ಡಿ.ದೇವರಾಜ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಚನ್ನಬಸಪ್ಪ, ಮಾಲೂರು ತಾಲ್ಲೂಕು ತಹಶೀಲ್ದಾರ್ ಮಲ್ಲಿಕಾರ್ಜುನ ಹಾಗೂ ಮತ್ತಿತರರು ಉಪಸ್ಥಿರತಿದ್ದರು.

ವರದಿ : ರವಿ ಕುಮಾರ್, ಕೋಲಾರ.

Edited By : Nagesh Gaonkar
PublicNext

PublicNext

23/09/2022 08:48 pm

Cinque Terre

23.79 K

Cinque Terre

1