ಕೋಲಾರ: ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಿಕೊಂಡಿದ್ದನ್ನು ತೆರವು ಮಾಡುವ ವೇಳೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ದಯಾನಂದ್ ಹಾಗೂ ಕಂದಾಯ ಸಿಬ್ಬಂದಿಯ ಮೇಲೆ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿರುವ ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೆ ಮುಂದಾಗಿದ್ದ ಆರೋಪಿ ರವಿಸಿಂಗ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಕ್ಕನಹಳ್ಳಿ ಗ್ರಾಮದಲ್ಲಿ ಸರ್ವೆ ನಂಬರ್ 29ರ ಸರ್ಕಾರಿ ಗೋಮಾಳ ಜಾಗವನ್ನು ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಾಣ ಮಾಡಲಾಗಿತ್ತು. ಒತ್ತುವರಿ ಮಾಡಿಕೊಂಡಿದ್ದ ಗೋಮಾಳ ಜಾಗವನ್ನು ತೆರವು ಮಾಡಲು ಮುಂದಾದಾಗ ಆರೋಪಿ ಆರೋಪಿ ರವಿಸಿಂಗ್ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
12/10/2022 10:06 pm