ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಡಿಸಿ ಅಕ್ರಂಪಾಷ್ ಚಾಲನೆ

ಕೋಲಾರ : ಎರಡು ನೂರು ವರ್ಷ ಪೂರ್ಣಗೊಂಡ ಹಿನ್ನಲೆ ಅಕ್ಟೋಬರ್‌ನಲ್ಲಿ ನಡೆಯುವ ಕಿತ್ತೂರು ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸರಕಾರ ತೀರ್ಮಾನಿಸಿದ್ದು, ಅದರಂತೆ ಚನ್ನಮ್ಮ ವಿಜಯಜ್ಯೋತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದರು.

ಅದರಂತೆ ಕೋಲಾರ ನಗರಕ್ಕೆ ಬಂದ ಕಿತ್ತೂರು ಉತ್ಸವ-2024ರ ಚೆನ್ನಮ್ಮ ವಿಜಯಜ್ಯೋತಿಗೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂಪಾಷ್ ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಧಿಕಾರಿ ಡಾ.ಮೈತ್ರಿ, ತಹಶೀಲ್ದಾರ್ ನಯನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಕಸಾಪ ಮಾಜಿ ಅಧ್ಯಕ್ಷ ನಾಗನಂದ್ ಕೆಂಪರಾಜ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್, ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮತ್ತು ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ರಾಯಣ್ಣ ಮತ್ತು ರಾಣಿ ಚನ್ನಮ್ಮಾಜಿ ಅಭಿಮಾನಿಗಳು ಮತ್ತು ಪೋಲಿಸ್ ಸಿಬ್ಬಂದಿ ಉಪಸ್ಥಿತರಿದ್ದರು.

Edited By : Nagesh Gaonkar
PublicNext

PublicNext

04/10/2024 10:52 pm

Cinque Terre

29.02 K

Cinque Terre

0