ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ ಜಾಗೃತಿ ಜಾಥಾ

ಕೋಲಾರ : ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಾವಯವ ಉತ್ಪನ್ನಗಳ ಹಾಗೂ ಸಿರಿಧಾನ್ಯಗಳ ಕುರಿತು ರೈತರಿಗೆ ಮತ್ತು ಗ್ರಾಹಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಂಗವಾಗಿ 'ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ' ಜಾಗೃತಿ ಜಾಥಾ ನಗರದಲ್ಲಿ ಇಂದು ನಡೆಯಿತು. ನಗರದ ಜ್ಯುನಿಯರ್ ಕಾಲೇಜು ಆವರಣದಿಂದ ಆರಂಭವಾದ ನಡಿಗೆ ಬಂಗಾರಪೇಟೆ ವೃತ್ತ ಮಾರ್ಗವಾಗಿ ಪರಿವಿಕ್ಷಣ ಮಂದಿರ ತಲುಪಿತು. ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಆಕ್ರಂಪಾಷ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಸಿರಿಧಾನ್ಯದ ಮಹತ್ವ ಅರಿವು ಹೆಚ್ಚಾಗುತ್ತಿದೆ. ಭಾರತ ಸಿರಿಧಾನ್ಯಗಳ ತವರೂರಾಗಿದೆ. ಜಗತ್ತಿನಲ್ಲಿ ಬೆಳೆಯುವ ಸಿರಿಧಾನ್ಯಗಳ ಪೈಕಿ ಶೇ. 42 ರಷ್ಟು ಸಿರಿಧಾನ್ಯವನ್ನು ನಮ್ಮ ದೇಶದಲ್ಲೇ ಬೆಳೆಯ ಲಾಗುತ್ತಿದ್ದು, ಸಿರಿಧಾನ್ಯ ಬೆಳೆಯುವಲ್ಲಿ ನಮ್ಮ ರಾಜ್ಯ ಮುಂದಿದೆ ಎಂದರು.

ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಿರಿಧಾನ್ಯ ಅತ್ಯುತ್ತಮ ಔಷಧಿ. ಬಹಳ ಕಡಿಮೆ ನೀರಿನಲ್ಲೂ ಸಿರಿಧಾನ್ಯ ಬೆಳೆಯ ಬಹುದಾಗಿದೆ. ರೋಗಮುಕ್ತ ಜೀವನಕ್ಕಾಗಿ ಎಲ್ಲರೂ ಸಿರಿ ಧಾನ್ಯಗಳ ಬಳಕೆಗೆ ಮುಂದಾಗಬೇಕು. ಸಿರಿಧಾನ್ಯಗಳು ಭೂಮಿಗೂ ವರದಾನ, ಆರೋಗ್ಯಕ್ಕೂ ವರದಾನ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ , ಜಂಟಿ ಕೃಷಿ ನಿರ್ದೇಶಕರು ಸುಮಾ,ಕೃಷಿ ಉಪ ನಿರ್ದೇಶಕಿ ಭವ್ಯರಾಣಿ,ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಆನಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಗೀತಾ,ತೋಟಗಾರಿಕೆ ಉಪನಿರ್ದೇಶಕ ಕುಮಾರಸ್ವಾಮಿ , ಕೃಷಿ ತಾಂತ್ರಿಕ ಅಧಿಕಾರಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು‌.

Edited By : PublicNext Desk
PublicNext

PublicNext

20/11/2024 07:07 pm

Cinque Terre

15 K

Cinque Terre

0