ಕೋಲಾರ: ಪಶು ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಿ ಜಿಲ್ಲಾದ್ಯಂತ ರಾಸುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಚರ್ಮ ಗಂಟು ರೋಗ, ಕಾಲುಬಾಯಿ ಜ್ವರ ನಿಯಂತ್ರಣಕ್ಕೆ ವಿಶೇಷ ಗ್ರಾಮೀಣ ವೈದ್ಯರ ತಂಡ ರಚನೆ ಮಾಡಿ ಸಂಕಷ್ಟದಲ್ಲಿರುವ ರೈತರ ರಕ್ಷಣೆ ಮಾಡಬೇಕೆಂದು ರೈತ ಸಂಘದಿಂದ ಪಶು ಇಲಾಖೆ ಮುಂದೆ ಹೋರಾಟ ಮಾಡಿ ಉಪ ನಿರ್ದೇಶಕರ, ಮುಖಾಂತರ ಪಶು ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.
ಬರ ಹಾಗೂ ಬೆಳೆ ನಷ್ಟ ರೈತರ ಬದುಕನ್ನು ಕಸಿದುಕೊಂಡರೆ ಮತ್ತೊಂದಡೆ ಖಾಸಗಿ ಸಾಲದಿಂದ ತ್ತತರಿಸಿರುವ ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿದ್ದ, ಹೈನುಗಾರಿಕೆಯನ್ನು ಪಶು ವೈದ್ಯರ ನಿರ್ಲಕ್ಷ್ಯದಿಂದ ರಾಸುಗಳಿಗೆ ಬಾದಿಸುತ್ತಿರುವ ರೋಗ ನಿಯಂತ್ರಣಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಕಣ್ಣು ಮುಂದೆಯೇ ಹಸುಗಳು ಸಾವನ್ನಪ್ಪುತ್ತಿದ್ದರೆ, ಸಾಕಿದ ರೈತ ಕಣ್ಣೀರಿನಿಂದ ಮಣ್ಣು ಮಾಡಬೇಕಾದ ಪರಿಸ್ಥಿತಿ ಇದ್ದರೂ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಪಶು ಇಲಾಖೆ ವಿರುದ್ಧ ಮಹಿಳಾ ಜಿಲ್ಲಾಧ್ಯಕ್ಷ ಎ.ನಳಿನಿಗೌಡ ಆಕ್ರೋಶ ವ್ಯಕ್ತಪಡಿಸಿದರು.
PublicNext
05/10/2024 09:43 pm