ಕೋಲಾರ: ಆಟವಾಡುತ್ತಿದ್ದ ನಾಲ್ಕು ಜನ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಫುಲ್ ಷಾ ಮೊಹಲ್ಲಾ, ಕಾಕಿ ಷಾ ಮೊಹಲ್ಲಾದಲ್ಲಿ ನಡೆದಿದೆ.
ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾಳಿಗೊಳಗಾದ ಮಕ್ಕಳ ಪೋಷಕರು ಕೋಲಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ, ನಗರದಲ್ಲಿ ಬೀದಿನಾಯಿಗಳ ಹಾವಳಿ ತಡೆಗಟ್ಟುವಂತೆ ಒತ್ತಾಯಿಸಿದರು.
ವರದಿ : ರವಿ ಕುಮಾರ್, ಕೋಲಾರ.
PublicNext
21/09/2022 07:57 am