ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿದ ವಿವಿಧ ಸಂಘಟನೆಗಳು

ವರದಿ : ರವಿ ಕುಮಾರ್,ಕೋಲಾರ

ಕೋಲಾರ : ಪರಿಶಿಷ್ಟ ಪಂಗಡಕ್ಕೆ ಶೇಕಡಾ 7.5% ಮೀಸಲಾತಿಯನ್ನು ಹೆಚ್ಚಿಸುವಂತೆ ಕೋಲಾರ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ, ವಾಲ್ಮೀಕಿ ಸಮುದಾಯ ಸೇರಿದಂತೆ ವಿವಿಧ ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ.

ನಗರದ ಜಿಲ್ಲಾಸ್ಪತ್ರೆ ವೃತ್ತದಿಂದ ಕಾಲೇಜು ವೃತ್ತದವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಮೀಸಲಾತಿ ಹೆಚ್ವಿಸುವುದಾಗಿ ಹೇಳಿ ವಚನ ಭ್ರಷ್ಟರಾಗಿದ್ದಾರೆ ಎಂದು ಸಚಿವ ಶ್ರೀರಾಮಲು ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ದ ಧಿಕ್ಕಾರ ಕೂಗಿದರು.

Edited By :
PublicNext

PublicNext

07/10/2022 03:39 pm

Cinque Terre

24.05 K

Cinque Terre

0

ಸಂಬಂಧಿತ ಸುದ್ದಿ