ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸ್ ಹುತಾತ್ಮರ ದಿನಾಚರಣೆ : ಜಿಲ್ಲೆಯ ಗಣ್ಯರಿಂದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಅರ್ಪಣೆ

Av

Headline

ಪೊಲೀಸ್ ಹುತಾತ್ಮರ ದಿನಾಚರಣೆ : ಜಿಲ್ಲೆಯ ಗಣ್ಯರಿಂದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಅರ್ಪಣೆ

ಕೋಲಾರ - ಕೋಲಾರ ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆ ಕೋಲಾರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ನಿಮಿತ್ತ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಅರ್ಪಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಇದೇ ವೇಳೆ ಮಾತನಾಡಿದ ಅವರು, ಈ ವೇಳೆ ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಆ ಮೂಲಕ ಅವರ ತ್ಯಾಗ ನೆನೆಯಲಾಗುವುದು. ನಿತ್ಯದಲ್ಲಿ ಪೊಲೀಸರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ‌. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹಳ ಮಹತ್ವದ್ದಾಗಿದೆ ಜಿಲ್ಲೆಯ ಪೊಲೀಸ್ ಸಿಬ್ಬಂದಿಗಳಿಗಾಗಿ ಹಲವಾರು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದು ಅತ್ಯಂತ ಶ್ಲಾಘನಿಯ ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳ, ಅಪರ ಪೊಲೀಸ್ ವರಿಷ್ಟಾಧಿಕಾರಿಗಳಾದ ರವಿಶಂಕರ್, ಜಗದೀಶ್, ಕೊಚಿಮುಲ್ ಒಕ್ಕೂಟದ ನಿರ್ದೇಶಕ ಅನಿಫ್, ಪೊಲೀಸ್ ಉಪ ಅಧಿಕ್ಷಕರಾದ ಹೆಚ್. ಎಂ ನಾಗ್ತೇ, ನಂದಕುಮಾರ್, ಮಂಜುನಾಥ್, ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

21/10/2024 02:21 pm

Cinque Terre

300

Cinque Terre

0

ಸಂಬಂಧಿತ ಸುದ್ದಿ