ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಮಕ್ಕಳ ಖಾಯಿಲೆ ಕುಂಠಿತ ಬೆಳವಣಿಗೆ ತೊಂದರೆಗಳ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿ - ಜಿಲ್ಲಾಧಿಕಾರಿ ಅಕ್ರಂ ಪಾಷ

ಕೋಲಾರ : ಮಕ್ಕಳ ಖಾಯಿಲೆಗಳು ಮತ್ತು ಕುಂಠಿತ ಬೆಳವಣಿಗೆಯ ತೊಂದರೆ ಬಗ್ಗೆ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ, ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ತಾಯಂದಿರ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಹುಟ್ಟುವ ಮಕ್ಕಳಲ್ಲಿ ಆಜನ್ಮ ನ್ಯೂನತೆಯು ಸುಮಾರು 100ಕ್ಕೆ 6 ರಿಂದ 7 ಮಕ್ಕಳಲ್ಲಿದ್ದು, ಶೇ.10ರಷ್ಟು ಮಕ್ಕಳಲ್ಲಿ ಕುಂಠಿತ ಬೆಳವಣಿಗೆ ಇರುತ್ತದೆ. ಪೌಷ್ಠಿಕ ಆಹಾರದ ಕೊರತೆ ಮತ್ತು ಇತರೆ ಖಾಯಿಲೆಗಳು ಬಂದು ಮಕ್ಕಳ ಮರಣ ಸಂಭವಿಸುವ ಸಾಧ್ಯತೆಯಿರುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ರಾಷ್ಟ್ರೀಯ ಬಾಲಾ ಸ್ವಾಸ್ಥ್ಯ ಕಾರ್ಯಕ್ರಮ ಆರಂಭವಾಗಿದೆ. ಹುಟ್ಟಿದ ಮಗುವಿನಿಂದ ಹಿಡಿದು 18 ವರ್ಷದ ವರೆಗಿನ ಮಕ್ಕಳಿಗೆ ಆಜನ್ಮ ನ್ಯೂನತೆ, ಮಕ್ಕಳ ಖಾಯಿಲೆಯಗಳು ಮತ್ತು ಕುಂಠಿತ ಬೆಳವಣಿಗೆಯ ತೊಂದರೆಗಳ ಬಗ್ಗೆ ತಪಾಸಣೆ ಮತ್ತು ಚಿಕಿತ್ಸೆಗಳನ್ನು ಒದಗಿಸಲು ವೈದ್ಯಕೀಯ ಶಾಲಾ ಆರೋಗ್ಯ ತಂಡಗಳನ್ನು ರಚಿಸಲಾಗಿದೆ.

ಈ ತಂಡಗಳು ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ನಡೆಸುವಂತಾಗಬೇಕು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ವೈದ್ಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಜಿಲ್ಲೆಯ ವಸತಿ ಶಾಲೆಗಳಲ್ಲಿ ವೈಯಕ್ತಿಕ ಸ್ವಚ್ಛತೆ ಕುರಿತು ಹೆಣ್ಣು ಮಕ್ಕಳಲ್ಲಿ ಅರಿವು ಮೂಡಿಸಲು ಕ್ರಮವಹಿಸಬೇಕು. ವೈದ್ಯಾಧಿಕಾರಿಗಳ ತಂಡ ನಿರಂತರವಾಗಿ ವಸತಿ ಶಾಲೆಗಳಿಗೆ ಭೇಟಿ ನೀಡಬೇಕು. ಅಲ್ಲಿನ ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ ಹಾಗೂ ಸ್ಯಾನಿಟರಿ ಪ್ಯಾಡ್‍ಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

21/10/2024 07:05 pm

Cinque Terre

280

Cinque Terre

0

ಸಂಬಂಧಿತ ಸುದ್ದಿ