ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಅಕ್ರಮ - ತನಿಖೆಗೆ ಒತ್ತಾಯ

ಕೋಲಾರ: ಭಾರತೀಯ ವಿದ್ಯಾರ್ಥಿ ಪರಿಷತ್ (ಎಸ್ಎಫ್ಐ)ನ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಕೋಲಾರ ಜಿಲ್ಲೆಯ ಅಂಬ್ಲಿಕಲ್ ಶಿವಪ್ಪರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ, ಭಾರತೀಯ ವಿದ್ಯಾರ್ಥಿ ಪರಿಷತ್‌ನ (ಎಸ್ಎಫ್ಐ). ಶಿವಪ್ಪ‌ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವ್ರು,

ಚಿಕ್ಕಬಳ್ಳಾಪುರದಲ್ಲಿ ನಡೆದ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯಲ್ಲಿ ಶಿವಪ್ಪ ಅವ್ರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ 51 ಜನ ಸಮಿತಿಯನ್ನ ಚುನಾಯಿಸಿಕೊಂಡಿರುವ ಎಸ್ಎಫ್ಐ 15 ಜನ ಪದಾಧಿಕಾರಿಗಳನ್ನ ನೇಮಕ ಮಾಡಿಕೊಂಡಿದ್ದಾರೆ. ನೂತನ ಸಮಿತಿಯು ರಾಜ್ಯದ ಶೈಕ್ಷಣಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ 16 ನಿರ್ಣಯಗಳನ್ನ ಜಾರಿಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಪ್ರಮುಖವಾಗಿ ಹಾಸ್ಟೆಲ್ಗಳಲ್ಲಿನ ಮೂಲಭೂತ ಸೌಕರ್ಯ, ಸ್ಕಾಲರ್ ಶಿಫ್, ಲೈಂಗಿಕ ಕಿರುಕುಳ ವಿರೋಧ ಸಮಿತಿಗಳ ಜಾರಿಗೆ ಒತ್ತಾಯಿಸುವುದಾಗಿ ಹೇಳಿದ್ರು. ಇನ್ನೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ 80 ಕೋಟಿ ರುಪಾಯಿಗಳ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ತನಿಖೆ ಕೈಗೊಳ್ಳುವಂತೆ ಸಹ ಒತ್ತಾಯಿಸಿದ್ರು. ಉತ್ತರ ವಿಶ್ವ ವಿದ್ಯಾಲಯದ ವ್ಯಾಪ್ತಿಯ ಕಾಲೇಜುಗಳಲ್ಲಿ ಶೈಕ್ಷಣಿಕ ಸಮಸ್ಯೆಗಳು ತೀವ್ರವಾಗಿದ್ದು ಇದರ ವಿರುದ್ದ ಭಾರತೀಯ ವಿದ್ಯಾರ್ಥಿ ಪರಿಷತ್ ಹೋರಾಟ ಮಾಡುವುದಾಗಿ ಹೇಳಿದ್ರು.

Edited By : Somashekar
PublicNext

PublicNext

04/10/2024 05:23 pm

Cinque Terre

15.86 K

Cinque Terre

0

ಸಂಬಂಧಿತ ಸುದ್ದಿ