ಕೋಲಾರ : ಸಾರ್ವಜನಿಕ ಆಸ್ತಿ ಕಬಳಿಸುತ್ತಿರುವ ವಕ್ಫ್ ಬೋರ್ಡ್ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನ. 22 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ಹೇಳಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸರ್ಕಾರಿ ಶಾಲೆ, ದೇವಾಲಯದ, ಹಿಂದೂ ಸ್ಮಶಾನ, ಸೇರಿದಂತೆ ಸಾರ್ವಜನಿಕ ಆಸ್ತಿ ಹಾಗೂ ಸರ್ಕಾರಿ ಆಸ್ತಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಸ್ವಾಧೀನಕ್ಕೆ ಪಡೆಯುತ್ತಿದ್ದು ಈ ಅಕ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಬಲಕ್ಕೆ ನಿಂತಿರುವುದನ್ನು ಖಂಡಿಸಿ ಇದೇ ತಿಂಗಳ ನವೆಂಬರ್ 22 ರಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರಗೂ "ನಮ್ಮ ಭೂಮಿ ನಮ್ಮ ಹಕ್ಕು" ಎಂಬ ಘೋಷ ವಾಕ್ಯದೊಂದಿಗೆ ನಗರದ ತಾಲೂಕು ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದರು .
PublicNext
20/11/2024 04:16 pm