ಕೋಲಾರ: ಮಹಿಳಾ ಅಧಿಕಾರಿಯ ವೈಯಕ್ತಿಕ ವಿಚಾರಗಳ ಕುರಿತು ಆರ್ಟಿಐನಲ್ಲಿ ಮಾಹಿತಿ ಕೇಳಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಲು ತಾಲ್ಲೂಕಿನ ಮಂಡಿಕಲ್ ನಾಗರಾಜ್ ಎಂಬ ಆರ್‌ಟಿಐ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದು, ಮಹಿಳಾ ತಹಶಿಲ್ದಾರ್ ಒಬ್ಬರ ವೈಯಕ್ತಿಕ ವಿಚಾರಗಳನ್ನು ಕೇಳಿ ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಈವರೆಗೆ ಎಷ್ಟು ಬಾರಿ ಮದುವೆಯಾಗಿದೆ, ಯಾರೊಂದಿಗೆ ಡಿವೋರ್ಸ್ ಆಗಿದೆ, ಸದ್ಯ ಯಾರ ಜೊತೆ ಸಂಸಾರ ಮಾಡುತ್ತಿದ್ದಾರೆ, ಎಲ್ಲಿ ಮದುವೆಯಾಗಿದೆ, ಲಗ್ನ ಪತ್ರಿಕೆ, ಕಲ್ಯಾಣ ಮಂಟಪ,ಗಂಡಂದಿರು ಬಿಡಲು ಕಾರಣ ಏನು ಎಂದು ವಿವರಗಳನ್ನು ನಾಗರಾಜ್ ಕೇಳಿರೋದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಇದಕ್ಕೆ ಮನನೊಂದು ಆರ್‌ಟಿಐ ಕಾರ್ಯಕರ್ತನ ವಿರುದ್ಧ ತಹಶಿಲ್ದಾರ್ ದೂರು ನೀಡಿರುವ ಹಿನ್ನೆಲೆ ಪೊಲೀಸರು ನಾಗರಾಜ್ ನನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
PublicNext
03/10/2022 03:15 pm