ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: "ಮಾಸ್ತಿ ಬಸ್ ನಿಲ್ದಾಣ ಕಾಮಗಾರಿ 2 ತಿಂಗಳಲ್ಲಿ ಪೂರ್ಣ"- ಶಾಸಕ ನಂಜೇಗೌಡ

ಮಾಲೂರು: ಮಾಸ್ತಿ ಗ್ರಾಮದ ಬಸ್ ನಿಲ್ದಾಣದ ಕಾಮಗಾರಿ 2 ತಿಂಗಳೊಳಗಾಗಿ ಪೂರ್ಣಗೊಳ್ಳುವುದು. ಬಳಿಕ ಉದ್ಘಾಟನೆಗೊಂಡು ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಶಾಸಕ ನಂಜೇಗೌಡ ತಿಳಿಸಿದರು.

ಶಾಸಕರು ಮಾಸ್ತಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು.

"ಹಲವಾರು ವರ್ಷಗಳಿಂದ ಮಾಸ್ತಿ ಬಸ್ ನಿಲ್ದಾಣವು ಅವ್ಯವಸ್ಥೆಗಳ ಆಗರವಾಗಿ ಸಾರ್ವಜನಿಕರಿಗೆ ತುಂಬಾ ಅನಾನುಕೂಲವಾಗಿತ್ತು.

ಈ ಹಿನ್ನೆಲೆಯಲ್ಲಿ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿತ್ತು. ಆದರೆ, ಬಸ್ ನಿಲ್ದಾಣ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದರಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದೇನೆ" ಎಂದು ಶಾಸಕ ನಂಜೇಗೌಡರು ತಿಳಿಸಿದ್ರು.

Edited By : Manjunath H D
PublicNext

PublicNext

05/10/2024 05:38 pm

Cinque Terre

15.99 K

Cinque Terre

0

ಸಂಬಂಧಿತ ಸುದ್ದಿ