ಕೋಲಾರ: ಭ್ರಷ್ಟಾಚಾರ ನಿರ್ಮೂಲನೆಗಾಗಿ ಜನರು ಬಿಜೆಪಿಗೆ ಅಧಿಕಾರ ಕೊಟ್ಟಿದ್ದಾರೆ. ತಪ್ಪು ಮಾಡಿರೋರು ಸಿಕ್ಕಿ ಹಾಕಿಕೊಳ್ಳುತ್ತಾರೆ. ತಪ್ಪು ಮಾಡದವರು ಎಲ್ಲಾ ಸಂಕಷ್ಟದಿಂದ ಆಚೆ ಬರುತ್ತಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಮತಾಂತರ ಕಾಯ್ದೆಗೆ ಕಾಂಗ್ರೆಸ್ ವಿರೋಧ ವಿಚಾರವಾಗಿ ಮಾತನಾಡಿದ ಸಚಿವರು, ಜನ ಈಗಾಗಲೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ. ಕಾಯ್ದೆಯಲ್ಲಿ ತಪ್ಪೇನಿದೆ ಅನ್ನೋದು ಹೇಳಲಿ. ಚುನಾಯಿತ ಪ್ರತಿನಿಧಿಗಳಾಗಿ ಕಾಯ್ದೆ ಪ್ರತಿಯನ್ನು ಹರಿದು ಹಾಕಿದ್ದಾರೆ ಎಂದು ಕಿಡಿಕಾರಿದರು.
ವರದಿ : ರವಿ ಕುಮಾರ್, ಕೋಲಾರ
PublicNext
18/09/2022 06:25 pm