ಕೋಲಾರದಲ್ಲಿ ನಿನ್ನೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಬಿರಿಯಾನಿಗಾಗಿ ಕಾರ್ಯಕರ್ತರ ಬಿಗ್ ಫೈಟ್ ನಡೆದಿದೆ. ಕೋಲಾರ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಸಮಾವೇಶದಲ್ಲಿ ಭಾಗವಹಿಸಿದ್ದವರಿಗೆ 2,500 ಕೆಜಿ ಚಿಕನ್ ಬಿರಿಯಾನಿ ಸಿದ್ಧಪಡಿಸಲಾಗಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಷಣ ಮುಗಿದ ಕೂಡಲೇ ಬಿರಿಯಾನಿಗಾಗಿ ಜನರು ಮುಗಿಬಿದ್ದ ಪರಿಣಾಮ ಮೈದಾನದಲ್ಲಿ ನೂಕುನುಗ್ಗಲು ಉಂಟಾಯಿತು.
PublicNext
19/09/2022 02:54 pm