ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಚಿಕ್ಕತಿರುಪತಿಯ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮಾಲೂರು: ಕೋಲಾರ ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕತಿರುಪತಿಯ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು. ದೇವರ ದರ್ಶನ ಪಡೆಯಲು ರಾಜ್ಯ ಸೇರಿದಂತೆ ತಮಿಳುನಾಡು, ಆಂಧ್ರದ ಗಡಿಭಾಗಗಳಿಂದ ಲಕ್ಷಾಂತರ ಭಕ್ತರು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದರು.

ದೇವಾಲಯದ ಮುಂಭಾಗ ಹಾಗೂ ಬಲಭಾಗದಲ್ಲಿ ಬೃಹತ್ ಪೆಂಡಾಲ್ ನಿರ್ಮಿಸಿ ಭಕ್ತರಿಗೆ ಸುಗಮ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಆಗಮಿಸಲು ಕಟಕಟೆ ವ್ಯವಸ್ಥೆ ಮಾಡಲಾಗಿತ್ತು.ದೇವಾಲಯದ ಸುತ್ತಲೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Edited By : PublicNext Desk
Kshetra Samachara

Kshetra Samachara

10/01/2025 11:34 am

Cinque Terre

180

Cinque Terre

0