ಕೊಪ್ಪಳ : ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಯಾವುಗಲೂ ಜೊತೆಗಿದೆ. ಆದರೆ ಇದೀಗ ಬಿಜೆಪಿಯವರು ಮೀಸಲಾತಿ ಘೋಷಣೆ ಮಾಡಿದ್ದೇವೆ ಎಂದು ಮೂಗಿಗೆ ತುಪ್ಪ ಹಚ್ಚುವ ಕೆಲಸ ಬಿಡಬೇಕು. ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದರು .
ಕೊಪ್ಪಳದಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರ ಕೇಂದ್ರ ಸರ್ಕಾರದಿಂದಲೂ ಒಪ್ಪಿಗೆ ಪಡೆದು ಜನರ ನಂಬಿಕೆ ಉಳಿಸಕೊಳ್ಳಬೇಕು. ಇದೀಗ ವಾಲ್ಮೀಕಿ ಸಮಾಜದವರು ಬಿಜೆಪಿಯ ನಡೆ ಖಂಡಿಸಿ ಕಲ್ಲು ಎಸೆಯುತ್ತಾರೆಂದು ಮೀಸಲಾತಿ ಘೋಷಣೆ ಮಾಡಿದೆ. ಇದಕ್ಕೆ ಬಿಜೆಪಿ ಸರ್ಕಾರ ಅಧಿಕೃತ ಮುದ್ರೆ ಒತ್ತಬೇಕು. ಅಂದಾಗ ಮಾತ್ರ ಪರಿಶಿಷ್ಟ ಜಾತಿಗೆ ಪರಿಶಿಷ್ಟ ಪಂಗಡಗಳಿಗೆ ನ್ಯಾಯ ಸಿಗುತ್ತೆ ಎಂದು ಬಿಜೆಪಿ ವಿರುದ್ಧ ತಂಗಡಗಿ ವಾಗ್ದಾಳಿ ನಡೆಸಿದರು.
PublicNext
08/10/2022 07:16 pm