ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಐಎಂಎ ಸಂಸ್ಥೆ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಆದರೆ ಮತ್ತಿಬ್ಬರ ವಿರುದ್ಧ ಯಾಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವ ಅನುಮಾನ ವ್ಯಕ್ತವಾಗಿದೆ.
ಸಿಬಿಐನಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ರಮೇಶ್ ಹಾಗೂ ಎಸ್‌ಐ ಗೌರಿಶಂಕರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಹೇಮಂತ್ ನಿಬಾಳ್ಕರ್ ಮತ್ತು ಅಜಯ್ ಹಿಲೋರಿ ಅವರ ವಿರುದ್ಧವೂ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಆದರೆ ಅವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.
PublicNext
19/10/2020 03:23 pm