ಬೆಂಗಳೂರು: ಹೆಲ್ಮೆಟ್ ಹಾಕದೆ ದ್ವಿಚಕ್ರ ವಾಹನ ಚಾಲನೆ ಮಾಡಿದರೆ ಇನ್ನುಮುಂದೆ ದಂಡದ ಜೊತೆಗೆ ಮೂರು ತಿಂಗಳು ಚಾಲನಾ ಪರವಾನಿಗೆ (ಡಿಎಲ್) ರದ್ದಾಗಲಿದೆ. ಮೋಟಾರು ಕಾಯ್ದೆ 1988ರ ಕಲಂ 194ರ ಅನ್ವಯ ರಾಜ್ಯ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 230 ಉಪ ನಿಯಮ (1)ರ ಪ್ರಕಾರ ಎಲ್ಲ ದಿಚಕ್ರ ವಾಹನ ಸವಾರರು, ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. 4 ವರ್ಷದ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ಜೊತೆಗೆ ಹಿಂಬದಿ ಸವಾರರು ಸಹ ಕಡ್ಡಾಯವಾಗಿ ಹೆಲ್ಮೆಟ್ ಹಾಕಬೇಕು. ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಹೆಲ್ಮೆಟ್ ಧರಿಸದೇ ಸಂಚರಿಸುವ ಪರಿಣಾಮವಾಗಿ ರಸ್ತೆ ಅಪಘಾತಗಳಲ್ಲಿ ಸವಾರರು ಸಾವನ್ನಪ್ಪುತ್ತಿದ್ದಾರೆ. ಇಂತಹ ಮರಣ/ತೀವ್ರತರವಾದ ಗಾಯಗಳನ್ನ ತಡೆಗಟ್ಟಲು ಮೋಟಾರು ವಾಹನಗಳ ಕಾಯ್ದೆಯಡಿ ದಂಡ ಮತ್ತು ಡಿಎಲ್ ಅಮಾನತುಗೊಳಿಸಲು ಸರ್ಕಾರ ಮುಂದಾಗಿದೆ.
PublicNext
19/10/2020 11:22 pm