ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪತ್ರಕರ್ತ ಅರ್ನಬ್ ಅರೆಸ್ಟ್ : ಸಚಿವ ಪ್ರಕಾಶ್ ಜಾವಡೇಕರ್ ಗರಂ

ನವದೆಹಲಿ : ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧನವನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಖಂಡಿಸಿದ್ದಾರೆ.

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಬಂಧನವನ್ನು ' ಮಹಾರಾಷ್ಟ್ರ ಸರ್ಕಾರ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ' ಎಂದು ಬಣ್ಣಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, 'ಇದು ತುರ್ತುಪರಿಸ್ಥಿತಿ ದಿನಗಳನ್ನು ನೆನಪಿಸುತ್ತದೆ' ಎಂದಿದ್ದಾರೆ.

'ಮಹಾರಾಷ್ಟ್ರದಲ್ಲಿ ನಡೆದಿರುವ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ' ಎಂದು ಜಾವಡೇಕರ್ ಟ್ವೀಟ್ ಮಾಡಿದ್ದಾರೆ.

'ಈ ರೀತಿ ಮಾಧ್ಯಮದೊಂದಿಗೆ ನಡೆದುಕೊಳ್ಳುವುದು ಸರಿಯಾದ ವಿಧಾನ ಅಲ್ಲ. ಮಾಧ್ಯಮದ ಮೇಲೆ ನಡೆದಿರುವ ಈ ದಾಳಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುತ್ತದೆ' ಎಂದು ಅವರು ಹೇಳಿದ್ದಾರೆ.

53 ವರ್ಷದ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಮಾಡಿಕೊಂಡ ಆರೋಪದ ಮೇಲೆ ಅರ್ನಬ್ ಗೋಸ್ವಾಮಿಯನ್ನು ಬುಧವಾರ ಮುಂಬೈನ ಅಲಿಬಾಗ್ ಪೊಲೀಸರು ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

Edited By : Nirmala Aralikatti
PublicNext

PublicNext

04/11/2020 12:51 pm

Cinque Terre

49.73 K

Cinque Terre

7

ಸಂಬಂಧಿತ ಸುದ್ದಿ