ಬೆಂಗಳೂರು: ಉತ್ತರ ಪ್ರದೇಶ ಮಾದರಿಯಲ್ಲಿಯೇ ರಾಜ್ಯದಲ್ಲೂ ಲವ್ ಜಿಹಾದ್ ನಿಯಂತ್ರಣಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದೆ.
ಅಲಹಾಬಾದ್ ಹೈಕೋರ್ಟ್ ಲವ್ ಜಿಹಾದ್ ಪ್ರಕರಣದ ಸಂಬಂಧ ಸೆಪ್ಟೆಂಬರ್ 23ರಂದು ಮಹತ್ವದ ತೀರ್ಪು ನೀಡಿತ್ತು. ಖುರಾನ್‌ನಲ್ಲಿನ ಒಂದು ಅಂಶವನ್ನು ಉಲ್ಲೇಖಿಸಿದ್ದ ಕೋರ್ಟ್, 'ಮದುವೆಯ ಉದ್ದೇಶಕ್ಕಾಗಿ ಮತಾಂತರವಾದರೆ ಅದು ಸ್ವೀಕೃತವಲ್ಲ' ಎಂದು ಹೇಳಿತ್ತು. ಈ ಆದೇಶವನ್ನೇ ಮುಂದಿಟ್ಟುಕೊಂಡು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಹೊಸ ಕಾನೂನಿಗೆ ಮುಂದಾಗಿದೆ.
ಲವ್ ಜಿಹಾದ್ ಸಾಬೀತಾದರೆ ಶಿಕ್ಷಾರ್ಹ ಅಪರಾಧವಾಗಿದ್ದು 1 ರಿಂದ 3 ವರ್ಷ ಜೈಲು ಶಿಕ್ಷೆ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ 10 ಸಾವಿರ ರೂ.ದಿಂದ 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬಲವಂತ ಮತಾಂತರ ಪ್ರಕರಣಗಳ ವಿಚಾರಣೆ ನಡೆಸಲು ಅವಕಾಶ ನೀಡುವ ಅಂಶ ಇರುವ ಸಾಧ್ಯತೆಯಿದೆ.
ಇದೇ ವಿಚಾರವಾಗಿ ಮಾತನಾಡಿರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಅಹಮದಾಬಾದ್ ಹೈಕೋರ್ಟ್ ತೀರ್ಪಿನ ಬಳಿಕ ದೇಶದಲ್ಲಿ ವ್ಯಾಪಕ ಚರ್ಚೆ ಆರಂಭವಾಗಿದೆ. ಈಗಿರುವ ಕಾನೂನು ಅಲ್ಲದೇ ವಿಶೇಷ ಕಾನೂನು ಆಗಬೇಕು ಅಂತಾ ಕೆಲವರು ಚಿಂತನೆ ಆರಂಭಿಸಿದ್ದಾರೆ. ಕೆಲವು ರಾಜ್ಯಗಳು ಘೋಷಣೆ ಕೂಡಾ ಮಾಡಿವೆ. ಸಂವಿಧಾನದ ಚೌಕಟ್ಟಿನಲ್ಲಿ ಕಾನೂನು ರಚನೆಯಾಗಬೇಕೆಂಬ ಚಿಂತನೆಯನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದ್ದಾರೆ.
PublicNext
04/11/2020 11:21 pm