ವರದಿ- ಈರನಗೌಡ ಪಾಟೀಲ
ಹಾವೇರಿ -ಬೈಕ್ ಹಾಗೂ ಬುಲೆರೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ವರ್ದಿ ಕ್ರಾಸ್ ಬಳಿ ನಡೆದಿದೆ, ಅತಿ ವೇಗವಾಗಿ ಬಂದ ಬುಲೆರೋ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮೃತ ವ್ಯಕ್ತಿಗಳನ್ನು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹರವಿ ಗ್ರಾಮದ ಚನ್ನವ್ವ ದೇವಗಿರಿ 64, ರುದ್ರಪ್ಪ ದೇವಗಿರಿ 35 ಎಂದು ಗುರುತಿಸಲಾಗಿದೆ, ಘಟನೆ ಸಂಬಂಧ ಆಡೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
27/07/2022 10:29 pm