ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಮೃತಪಟ್ಟವರ ಕುಟುಂಬಗಳಿಗೆ ಶಾಸಕ ರಾಜೇಶ್ ಗೌಡ ಸಾಂತ್ವನ; ಹೆಚ್ಚಿನ ಪರಿಹಾರಕ್ಕೆ ಒತ್ತಾಯ

ಶಿರಾ: ಶಿರಾ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಇಂದು ಶಿರಾ ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕಳ್ಳಂಬೆಳ್ಳ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಾಳುಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಶಾಸಕರು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತು ಮೃತಪಟ್ಟವರೆಲ್ಲರೂ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಡುಬಡವರಾಗಿದ್ದಾರೆ. ಕೂಲಿ ಕೆಲಸಕ್ಕೆ ಬೆಂಗಳೂರಿಗೆ ತೆರಳುತ್ತಿರುವಾಗ ಭೀಕರ ಅಪಘಾತ ಸಂಭವಿಸಿದ್ದು, ನೊಂದ ಎಲ್ಲ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರವನ್ನು ಮತ್ತು ಜೀವನ ನಿರ್ವಹಣೆಗಾಗಿ ಸೂಕ್ತ ವ್ಯವಸ್ಥೆ ಮಾಡಿಕೊಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

Edited By :
PublicNext

PublicNext

25/08/2022 02:46 pm

Cinque Terre

44.5 K

Cinque Terre

0

ಸಂಬಂಧಿತ ಸುದ್ದಿ