ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳಿಗಾಗಿ ಅನ್ನದಾತರು ಇಂದು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಿಂದ ಸಾವಿರಾರು ರೈತರು ರಾಜಧಾನಿಗೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ಉಂಟಾಗಿದೆ
ಶಾಲು ತೆಗೆಯಿರಿ, ಬಾರು ಕೋಲು ತೆಗೆಯಿರಿ ಎಂದು ಪೊಲೀಸ್ ಸಿಬ್ಬಂದಿಗಳು ರೈತರಿಗೆ ವಾರ್ನ್ ಮಾಡಿದ್ದಾರೆ. ಈ ವೇಳೆ ಪೊಲೀಸರು ಹಾಗೂ ರೈತರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ರೈತರಿಗೆ ಹಸಿರು ಶಾಲು ಸಿಂಬಲ್. ಶಾಲು ತೆಗೆಯಿರಿ ಅಂತ ಹೇಳೋಕೆ ಅವನು ಯಾರು? ಎನ್ನುತ್ತ ಪೊಲೀಸರ ವಿರುದ್ಧವೇ ತಿರುಗಿಬಿದ್ದರು.
ವಿವಿಧ ಜಿಲ್ಲೆಗಳಿಂದ ರೈತರು ರೈಲ್ವೆ ಸ್ಟೇಷನ್ ಗೆ ಆಗಮಿಸಿ ರ್ಯಾಲಿ ನಡೆಸಲಿದ್ದಾರೆ. ಬೆಳ್ಳಗ್ಗೆ 11 ಗಂಟೆಗೆ ಇಲ್ಲಿಂದ ವಿಧಾನಸೌಧದ ಕಡೆ ಜಾಥ ನಡೆಯಲಿದೆ. ರೈತರ ಜಾಥ ಮೆಜೆಸ್ಟಿಕ್ ರೈಲ್ವೆ ಸ್ಟೇಷನ್ ನಿಂದ ಆರಂಭ ಹಿನ್ನೆಲೆ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬೆಳ್ಳಂಬೆಳಗ್ಗೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ ಮುಂಭಾಗ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈಲ್ವೆ ಸ್ಟೇಷನ್ ಮುಂಭಾಗ ಬ್ಯಾರೀಕೇಡ್ ಗಳನ್ನ ಹಾಕಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.
PublicNext
09/12/2020 08:37 am