ನವದೆಹಲಿ: ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯ್ಕ್ ಹಾಗೂ ಅವರ ತಾಯಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಾದ ಫೆರೋಜ್ ಶೇಖ್ ಹಾಗೂ ನಿತೀಶ್ ಸರ್ದಾ ಅವರನ್ನು ಮಹಾರಾಷ್ಟ್ರದ ಅಲಿಬಾಗ್ ಪೊಲೀಸರು ನವೆಂಬರ್ 4 ರಂದು ಬಂಧಿಸಿದ್ದರು.
ಶನಿವಾರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ಬಾಂಬೆ ಹೈಕೋರ್ಟ್ ಸೋಮವಾರಕ್ಕೆ ಆದೇಶ ಕಾಯ್ದಿರಿಸಿತ್ತು. ಇದೀಗ ತನ್ನ ಆದೇಶದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
PublicNext
09/11/2020 05:13 pm