ಮುಂಬೈ: 2018 ರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಅರ್ನಬ್ ಸುಪ್ರೀಂ ಗೆ ಮೊರೆ ಹೋಗಿದ್ದಾರೆ.
ಅರ್ನಬ್ ಅವರಿಗೆ ಜಾಮೀನು ನೀಡಲು ನಿನ್ನೆ ಹೈಕೋರ್ಟ್ ನಿರಾಕರಿಸಿತ್ತು.
ನೇರವಾಗಿ ಹೈ ಕೋರ್ಟ್ ಗೆ ಬರುವ ಬದಲು, ಮೊದಲು ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತೆ ಕೋರ್ಟ್ ಆದೇಶಿಸಿತ್ತು.
ಮಾತ್ರವಲ್ಲದೇ ಈ ಅರ್ಜಿಯ ವಿಚಾರಣೆಯನ್ನು ನಾಲ್ಕು ದಿನಗಳಲ್ಲಿ ಮುಗಿಸುವಂತೆ ಸೆಷನ್ಸ್ ಕೋರ್ಟ್ ಗೆ ಹೈಕೋರ್ಟ್ ನ್ಯಾಯಮೂರ್ತಿಗಳು ನಿರ್ದೇಶಿಸಿದ್ದರು.
ಆದರೆ, ಈ ಆದೇಶ ಸರಿಯಾಗಿಲ್ಲ ಎಂದು ಆರೋಪಿಸಿರುವ ಅರ್ನಬ್ ಸುಪ್ರೀಂ ಕೋರ್ಟ್ ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ಅಲಿಬೌಗ್ ನ ಕೋರ್ಟ್ ಅರ್ನಬ್ ಗೋಸ್ವಾಮಿ ಮತ್ತು ಇತರ ಇಬ್ಬರನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.
PublicNext
10/11/2020 03:55 pm