ಬೆಳಗಾವಿ: ಭಾರತೀಯ ಸೇನೆಯಿಂದ ರಜೆಗೆ ಬಂದಿದ್ದ ಮಗನನ್ನು ಕೊಲೆಗೈದಿದ್ದ ಪಾಪಿ ತಂದೆಗೆ ಬೆಳಗಾವಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಆರೋಪಿ ತಂದೆ ವಿಠ್ಠಲ್‌ಗೆ ನ್ಯಾಯಾಲಯವು ಇಂದು ಜೀವಾವಧಿ ಶಿಕ್ಷೆಯ ಜೊತೆಗೆ ಮೂರು ಸಾವಿರ ರೂ. ದಂಡ ವಿಧಿಸಿದೆ. 2016ರ ಡಿಸೆಂಬರ್ 12ರಂದು ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದಲ್ಲಿ ಮಗ ಈರಣ್ಣ ಇಂಡಿ ಅವರನ್ನು ಹತ್ಯೆಗೈದಿದ್ದ.
ತಂದೆ ಮಗನ ಮಧ್ಯೆ ಹಣಕಾಸಿನ ವ್ಯವಹಾರ ಸಂಬಂಧ ಗಲಾಟೆ ನಡೆದಿತ್ತು. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ವಿಠ್ಠಲ್ ರಿವಾಲ್ವರ್ ನಿಂದ ಗುಂಡು ಹಾರಿಸಿ ಮಗನ ಹತ್ಯೆಗೈದಿದ್ದ. ವಿಠ್ಠಲ್ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
PublicNext
11/11/2020 10:37 pm