ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಪಿಎಸ್‌ಸಿ ಮುಚ್ಚುವುದೇ ಲೇಸು: ಚಾಟಿ ಬೀಸಿದ ಹೈಕೋರ್ಟ್‌

ಬೆಂಗಳೂರು: ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ವಿಫಲವಾಗಿರುವ ಕರ್ನಾಟಕ ಲೋಕಸೇವಾ ಆಯೋಗವನ್ನು ಮುಚ್ಚುವುದೇ ಲೇಸು ಎಂದು ಹೈಕೋರ್ಟ್‌ ಅಸಮಾಧಾನ ಹೊರ ಹಾಕಿದೆ.

1998ನೇ ಸಾಲಿನ ಗೆಜಿಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕದ ಅಕ್ರಮ ಕುರಿತಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಇತ್ಯರ್ಥ ಮಾಡಲಾಯಿತು. ಈ ವೇಳೆ ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ವಿಭಾಗೀಯಪೀಠವು ಕೆಪಿಎಸ್‌ಸಿಗೆ ಚಾಟಿ ಬೀಸಿದೆ.

ಕೆಪಿಎಸ್‌ಸಿ ನಡೆಸುತ್ತಿರುವ ಪ್ರತಿ ನೇಮಕಾತಿಯಲ್ಲಿಯೂ ಗೊಂದಲ ಸೃಷ್ಟಿಯಾಗುತ್ತಿದ್ದು, ಆಕ್ರಮಗಳ ಕೂಪವಾಗಿ ಮಾರ್ಪಟ್ಟಿದೆ. ಇಲ್ಲಿ ನಡೆಯುವ ಅಕ್ರಮಗಳನ್ನು ಸರಿಪಡಿಸಲು ಸಾಧ್ಯವೇ ಇಲ್ಲ ಎಂಬಂತಾಗಿದೆ. ರಾಜ್ಯದಲ್ಲಿ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದು ಕೊಳ್ಳಬೇಕಾಗಿದ್ದು, ಕೆಪಿಎಸ್‌ಸಿ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಇದು ಸೂಕ್ತ ಸಮಯ ಎಂದು ನ್ಯಾಯಪೀಠವು ಹೇಳಿದೆ.

ಕೆಪಿಎಸ್‌ಸಿ ಇಂತಹ ಸ್ಥಿತಿಗೆ ರಾಜ್ಯ ಸರ್ಕಾರವು ಕೂಡ ಕಾರಣವಾಗುತ್ತದೆ. ಸಾರ್ವಜನಿಕ ಕಲ್ಯಾಣ ಮತ್ತು ಜನರ ಹಿತಾಸಕ್ತಿ ಕಾಯುವ ಆಸಕ್ತಿ ಸರ್ಕಾರಗಳಿಗೆ ಇದ್ದಿದ್ದರೆ ಪ್ರಾಮಾಣಿಕ, ದಕ್ಷ ಮತ್ತು ಅರ್ಹ ವ್ಯಕ್ತಿಗಳನ್ನು ಕೆಪಿಎಸ್‌ಸಿಗೆ ನೇಮಕ ಮಾಡಬೇಕಿತ್ತು ಎಂದು ತಿಳಿಸಿದೆ.

Edited By : Vijay Kumar
PublicNext

PublicNext

15/11/2020 02:30 pm

Cinque Terre

52.38 K

Cinque Terre

5

ಸಂಬಂಧಿತ ಸುದ್ದಿ