ಬೆಂಗಳೂರು: ನಗರದ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಹ್ಯಾಂಗ್ ಓವರ್ ಪಬ್ ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಮಧ್ಯಾಹ್ನ ಸರಿ ಸುಮಾರು 12.25ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಬೆಂಕಿ ಅವಘಡಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ. ಮೇಲ್ನೋಟಕ್ಕೆ ಶಾರ್ಟ್ ಸಕ್ಯೂರ್ಟ್ ಎಂದು ಹೇಳಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
PublicNext
16/11/2020 04:43 pm