ಬೆಂಗಳೂರು: ಕನ್ನಡಪರ ಸಂಘಟನೆಗಳು ಕರೆ ನೀಡಿದ ಬಂದ್ ಗೆ ಅನುಮತಿ ನೀಡಿಲ್ಲ. ಆದರೂ ಮುಂಜಾಗೃತಾ ಕ್ರಮವಾಗಿ ಎಲ್ಲಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಬೆಳಗ್ಗೆಯಿಂದ ಪೊಲೀಸ್ ಇಲಾಖೆ ಭದ್ರತೆಗಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. 15 ಸಾವಿರಕ್ಕಿಂತ ಹೆಚ್ಚು ಪೊಲೀಸರಿಗೆ ನಾಳೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 5 ಜನ ಅಡಿಷನ್ ಸಿಪಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಿಯೋಜನೆ ಮಾಡಲಾಗುತ್ತದೆ. 35 ಕೆಎಸ್‍ಆರ್‍ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದನೇ ಪ್ರತಿ ಏರಿಯಾದಲ್ಲಿ ಅಧಿಕಾರಿಗಳು ರೌಂಡನ್‍ನಲ್ಲಿ ಇರುತ್ತಾರೆ ಎಂದರು.
ಬಂದ್ ಹಿನ್ನಲೆಯಲ್ಲಿ ಯಾರು ಕೂಡ ಕಾನೂನು ಭಂಗ ಮಾಡುವಂತಿಲ್ಲ. ಅದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ. ಬಂದ್‍ಗಾಗಿ ಯಾರು ಪರ್ಮಿಷನ್ ಕೇಳಿಲ್ಲ. ನಾವು ಯಾವುದೇ ಪರ್ಮಿಷನ್‍ನನ್ನು ಕೊಟ್ಟಿಲ್ಲ. ಯಾರಾದರೂ ಚೇಷ್ಟೆ ಮಾಡಿದರೆ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ಇರುವುದಿಲ್ಲ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.
PublicNext
04/12/2020 02:30 pm